ಡಿ.ಶ್ರೀನಿವಾಸ್
ಚಿತ್ರಕೃಪೆ: @revanth_anumula
ಹೈದರಾಬಾದ್: ಕಾಂಗ್ರೆಸ್ ಹಿರಿಯ ನಾಯಕ ಡಿ. ಶ್ರೀನಿವಾಸ್ (76) ಅವರು ಇಂದು (ಶನಿವಾರ) ನಿಧನರಾದರು ಎಂದು ಅವರ ಪುತ್ರ, ನಿಜಾಮಾಬಾದ್ ಸಂಸದ ಡಿ. ಅರವಿಂದ್ ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಶ್ರೀನಿವಾಸ್ ಅವರು ಅಸ್ವಸ್ಥರಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಶ್ರೀನಿವಾಸ್ ಅವರು 2004ರಿಂದ 2009ರವರೆಗೆ ಆಂಧ್ರಪ್ರದೇಶ(ಅವಿಭಜಿತ) ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು. ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ್ ರೆಡ್ಡಿ ಅವರ ಸಂಪುಟದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ನಂತರದ ದಿನಗಳಲ್ಲಿ ಕಾಂಗ್ರೆಸ್ ತೊರೆದು ಬಿಆರ್‌ಎಸ್ ಪಕ್ಷ ಸೇರಿದ ಅವರು 2016 ರಿಂದ 2022ರವರೆಗೆ ರಾಜ್ಯಸಭಾ ಸದಸ್ಯರಾಗಿದ್ದರು. ಇತ್ತೀಚೆಗೆ ಮರಳಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.
ಶ್ರೀನಿವಾಸ ಅವರ ನಿಧನಕ್ಕೆ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ, ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.