ನವದೆಹಲಿ: ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಪಾಕಿಸ್ತಾನದ ಪ್ರಜೆಗಳನ್ನು ಗಡೀಪಾರು ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಶುಕ್ರವಾರ ಆಗ್ರಹಿಸಿದೆ.
ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆಯನ್ನು ಶೀಘ್ರ ಶುರು ಮಾಡಬೇಕು ಎಂದೂ ಇದೇ ಸಂದರ್ಭ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಪ್ರಜೆಗಳಿಗೆ ನೀಡಲಾಗಿದ್ದ ಎಲ್ಲ ವೀಸಾಗಳನ್ನು ಭಾರತ ರದ್ದುಗೊಳಿಸಿದೆ. ಆದರೆ ಅನೇಕ ವರ್ಷಗಳಿಂದ ಪಾಕಿಸ್ತಾನದ ಪ್ರಜೆಗಳು ಭಾರತದಲ್ಲಿ ವಾಸಿಸುತ್ತಿದ್ದಾರೆ. ಇವರಲ್ಲಿ ಬಹುತೇಕರು ಆಧಾರ್, ಪಡಿತರ ಚೀಟಿಗಳನ್ನು ಪಡೆದಿದ್ದಾರೆ. ಇವರನ್ನು ಪತ್ತೆ ಹಚ್ಚಿ ಗಡೀಪಾರು ಮಾಡಬೇಕು ಎಂದು ವಿಎಚ್‌ಪಿ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದಾರೆ.
ಜನಗಣತಿ ನಡೆಸುವ ಜೊತೆಗೆ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆಯನ್ನು ನಡೆಸಬೇಕು ಎಂದು ಜೈನ್ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.