ಮುರ್ಶಿದಾಬಾದ್ ಹಿಂಸಾಚಾರ ಖಂಡಿಸಿ ಶನಿವಾರ ಜಮ್ಮುವಿನಲ್ಲಿ ಪ್ರತಿಭಟನೆ ನಡೆಸಿದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಮಮತಾ ಬ್ಯಾನರ್ಜಿ ಅವರ ಭಾವಚಿತ್ರವನ್ನು ಸುಟ್ಟುಹಾಕಿದರು
–ಪಿಟಿಐ ಚಿತ್ರ
ನವದೆಹಲಿ/ಕೋಲ್ಕತ್ತ: ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ, ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನಲ್ಲಿ ನಡೆದ ಹಿಂಸಾಚಾರ ಖಂಡಿಸಿ ವಿಶ್ವ ಹಿಂದೂ ಪರಿಷತ್ ಸಂಘಟನೆಯು ಶನಿವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿತು.
‘ಕಳೆದ ವಾರ ನಡೆದ ಹಿಂಸಾಚಾರದಿಂದ ಮೂರು ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಕಾನೂನು–ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ನವದೆಹಲಿಯ ನಂಗ್‌ಲೊಲಿ ವೃತ್ತದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿಎಚ್‌ಪಿ ಪ್ರಧಾನಿ ಕಾರ್ಯದರ್ಶಿ ಬಜರಂಗ್ ಬಾಗ್ದಾ ಅವರು ಹಿಂಸಾಚಾರವನ್ನು ತೀವ್ರವಾಗಿ ಖಂಡಿಸಿದರು.
ನೋಯ್ಡಾದಲ್ಲಿ ಸಂಘಟನೆಯ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ನೇತೃತ್ವದಲ್ಲಿ ಬೃಹತ್ ರ‍್ಯಾಲಿ ಆಯೋಜಿಸಿ, ಹಿಂಸಾಚಾರವನ್ನು ತೀವ್ರವಾಗಿ ಖಂಡಿಸಲಾಯಿತು.
ಮುರ್ಶಿದಾಬಾದ್ ಹಿಂಸಾಚಾರ ಖಂಡಿಸಿ ಶನಿವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಅಸ್ಸಾಂನ ನಾಗಾಂವ್‌ನಲ್ಲಿ ಪ್ರತಿಭಟನೆ ನಡೆಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.