ADVERTISEMENT

ಜಾರ್ಖಂಡ್‌ನಲ್ಲಿ ವಿಎಚ್‌ಪಿ ಮುಖಂಡನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಪಿಟಿಐ
Published 9 ಸೆಪ್ಟೆಂಬರ್ 2021, 10:47 IST
Last Updated 9 ಸೆಪ್ಟೆಂಬರ್ 2021, 10:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಶೆಡ್‌ಪುರ: ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಖಂಡನ ಮೇಲೆ ಜಾರ್ಖಂಡ್‌ನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಬಬ್ಲು ಕುಮಾರ್ ಸಿಂಗ್ ಅವರು ವಿಎಚ್‌ಪಿ ಬಗ್ಬೇರ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸದ್ಯ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಬ್ಲು ಕುಮಾರ್ ಸಿಂಗ್ ಎಂಬುವರ ಮೇಲೆ ಇಬ್ಬರು ದುಷ್ಕರ್ಮಿಗಳು ಐದರಿಂದ ಆರು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ತಮಿಳು ವರ್ಣನ್ ಹೇಳಿದ್ದಾರೆ.

ADVERTISEMENT

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಂಕಿತ ಆರೋಪಿಯೊಬ್ಬ ಒಂದು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.