ADVERTISEMENT

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ನೇಮಕ

ಪಿಟಿಐ
Published 19 ಏಪ್ರಿಲ್ 2024, 5:30 IST
Last Updated 19 ಏಪ್ರಿಲ್ 2024, 5:30 IST
<div class="paragraphs"><p>ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ</p></div>

ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ

   

(ಚಿತ್ರ ಕೃಪೆ–@DefProdnIndia)

ನವದೆಹಲಿ: ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಅವರನ್ನು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.

ADVERTISEMENT

ಪ್ರಸ್ತುತ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ಅವರು ಏಪ್ರಿಲ್ 30ರಂದು ಸೇವೆಯಿಂದ ನಿವೃತ್ತರಾಗಲಿದ್ದು, ದಿನೇಶ್ ತ್ರಿಪಾಠಿ ಅಂದೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

1964ರ ಮೇ 15 ರಂದು ಜನಿಸಿದ ತ್ರಿಪಾಠಿ ಅವರು, ಖಡಕ್‌ವಾಸ್ಲಾದ ಸೈನಿಕ್ ಸ್ಕೂಲ್ ರೇವಾ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ. 1985ರಲ್ಲಿ ಅವರನ್ನು ಭಾರತೀಯ ನೌಕಾಪಡೆಯ ಕಾರ್ಯನಿರ್ವಾಹಕ ಶಾಖೆಗೆ ನಿಯೋಜಿಸಲಾಯಿತು.

ಸಂವಹನ ಮತ್ತು ಎಲೆಕ್ಟ್ರಾನಿಕ್ ಯುದ್ಧ ತಜ್ಞರಾದ ಇವರು ಸುಮಾರು 30 ವರ್ಷಗಳ ಕಾಲ ಸುದೀರ್ಘ ಸೇವಾ ಅನುಭವ ಹೊಂದಿದ್ದಾರೆ. ಜತೆಗೆ ಅತಿ ವಿಶಿಷ್ಟ ಸೇವಾ ಪದಕ (AVSM) ಮತ್ತು ನವೋ ಸೇನಾ ಪದಕ (NM)ಗಳನ್ನು ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.