ಮದ್ರಾಸ್ ಹೈಕೋರ್ಟ್
ಚೆನ್ನೈ: ರಾಜ್ಯ ಸರ್ಕಾರದ ಆಡಳಿತಕ್ಕೆ ಒಳಪಡುವ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕ ಮಾಡುವ ರಾಜ್ಯ ಸರ್ಕಾರದ ಕ್ರಮಕ್ಕೆ ಮದ್ರಾಸ್ ಹೈಕೋರ್ಟ್ ಬುಧವಾರ ಮಧ್ಯಂತರ ತಡೆ ನೀಡಿದೆ.
ತರಾತುರಿಯಲ್ಲಿ ಪ್ರಕರಣ ಕೈಗೆತ್ತಿಕೊಳ್ಳುತ್ತಿರುವುದಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದರೂ, ನ್ಯಾ. ಜಿ.ಆರ್. ಸ್ವಾಮಿನಾಥನ್ ಮತ್ತು ನ್ಯಾ. ವಿ. ಲಕ್ಷ್ಮೀನಾರಾಯಣನ್ ಅವರಿದ್ದ ವಿಭಾಗೀಯ ಪೀಠವು ಮಧ್ಯಂತರ ತಡೆ ನೀಡಿತು.
ಬಿಜೆಪಿ ಮುಖಂಡರೂ ಆಗಿರುವ ವಕೀಲರೊಬ್ಬರು ಸರ್ಕಾರದ ಕ್ರಮದ ವಿರುದ್ಧ ಅರ್ಜಿ ಸಲ್ಲಿಸಿದ್ದರು.
ಸದ್ಯ ಹೈಕೋರ್ಟ್ ತಡೆ ನೀಡಿರುವ ಈ ಪ್ರಕರಣವು ಸುಪ್ರೀಂಕೋರ್ಟ್‌ನಿಂದ ಒಪ್ಪಿಗೆ ಪಡೆದ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ವ್ಯಾಜ್ಯದಲ್ಲಿನ ಒಂದು ಮಸೂದೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.