ಸಿ.ಪಿ. ರಾಧಾಕೃಷ್ಣನ್ ಮತ್ತು ನರೇಂದ್ರ ಮೋದಿ
ಚೆನ್ನೈ: ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಘೋಷಿಸಿರುವುದನ್ನು ಸೋಮವಾರ ಟೀಕಿಸಿರುವ ಡಿಎಂಕೆ, ‘ತಮಿಳುನಾಡಿನ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಲಾಭ ಪಡೆಯಲು ಈ ಆಯ್ಕೆ ನಡೆದಿದೆ’ ಎಂದು ಹೇಳಿದೆ.
‘ತಮಿಳುನಾಡಿನ ಜನರನ್ನು ಸೆಳೆಯಲು ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ಏನೂ ಒಳ್ಳೆಯದಾಗುವುದಿಲ್ಲ’ ಎಂದು ಡಿಎಂಕೆಯ ಹಿರಿಯ ನಾಯಕ ಟಿ.ಕೆ.ಎಸ್ ಇಳಂಗೋವನ್ ಅವರು ಹೇಳಿದ್ದಾರೆ. ಎನ್‌ಡಿಎ ಅಭ್ಯರ್ಥಿಗೆ ಡಿಎಂಕೆ ಬೆಂಬಲ ನೀಡದಿರುವ ಬಗ್ಗೆಯೂ ಸ್ಪಷ್ಟ ಸುಳಿವು ನೀಡಿದ್ದಾರೆ.
‘ಜನರ ಒಳಿತಿಗಾಗಿ ರಾಧಾಕೃಷ್ಣ ಅವರನ್ನು ಆಯ್ಕೆ ಮಾಡಲಾಗಿಲ್ಲ. ತಮಿಳರೊಬ್ಬರನ್ನು ಉಪರಾಷ್ಟ್ರಪತಿ ಮಾಡಿದ್ದೇವೆ ಎನ್ನುವ ಮೂಲಕ ಜನರಿಗೆ ಮೋಸ ಮಾಡುವ ಉದ್ದೇಶವನ್ನು ಬಿಜೆಪಿ ಹೊಂದಿದೆ’ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.