ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್
ಕೃಪೆ: ಪಿಟಿಐ
ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ, ಸೆ.12) ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್‌ಗೆ ಪ್ರಮಾಣವಚನ ಬೋಧಿಸಿದರು.
ಈ ವೇಳೆ ಮಾಜಿ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್, ವೆಂಕಯ್ಯ ನಾಯ್ಡು, ಹಮೀದ್ ಅನ್ಸಾರಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಹುದ್ದೆಗೆ ಮಂಗಳವಾರ (ಸೆ.9) ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಧಾಕೃಷ್ಣನ್, ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರನ್ನು ಮಣಿಸಿದ್ದರು.
ರಾಧಾಕೃಷ್ಣನ್ ಪರ ಒಟ್ಟು 452 ಮತಗಳು ಚಲಾವಣೆಯಾಗಿದ್ದವು. ರೆಡ್ಡಿ 300 ಮತಗಳನ್ನು ಗಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.