ADVERTISEMENT

Vice President: ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್‌ ಇಂದು ಪ್ರಮಾಣವಚನ

ಪಿಟಿಐ
Published 11 ಸೆಪ್ಟೆಂಬರ್ 2025, 23:30 IST
Last Updated 11 ಸೆಪ್ಟೆಂಬರ್ 2025, 23:30 IST
ಸಿ.ಪಿ.ರಾಧಾಕೃಷ್ಣನ್
ಸಿ.ಪಿ.ರಾಧಾಕೃಷ್ಣನ್   

ನವದೆಹಲಿ: ಸಿ.ಪಿ.ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ಬೆಳಿಗ್ಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದುವರೆಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದ ರಾಧಾಕೃಷ್ಣನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ ಗುಜರಾತ್‌ನ ರಾಜ್ಯಪಾಲ ದೇವವ್ರತ್‌ ಆಚಾರ್ಯ ಅವರಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ನಾಯಕರಿಗೆ ಈಗಾಗಲೇ ಆಹ್ವಾನ ಕಳುಹಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ರಾಜ್ಯಸಭೆಯ ಸಭಾ ನಾಯಕರನ್ನು ರಾಧಾಕೃಷ್ಣನ್‌ ಭೇಟಿಯಾಗಲಿದ್ದಾರೆ. ನಂತರ ನಡೆಯಲಿರುವ ಸಭೆಗೆ ಎಲ್ಲ ಪಕ್ಷಗಳ ನಾಯಕರನ್ನು ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.