ಪಿ.ಸಿ ಮೋದಿ
ನವವದೆಹಲಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ.
ಚುನಾವಣೆ ನಡೆಸಲು ರಾಜ್ಯಸಭೆಯ ಮುಖ್ಯಕಾರ್ಯದರ್ಶಿಯನ್ನು ಚುನಾವಣಾ ಅಧಿಕಾರಿಯನ್ನಾಗಿ ನೇಮಿಸಿದೆ.
ಸದ್ಯ ಪಿ.ಸಿ ಮೋದಿ ರಾಜ್ಯಸಭೆಯ ಕಾರ್ಯದರ್ಶಿಯಾಗಿದ್ದಾರೆ.
ಧನಕರ್ ಅವರು ಜುಲೈ 21 ರಂದು ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ.
‘ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ‘ ಎಂದು ಅವರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.
74 ವರ್ಷದ ಧನಕರ್, ಆಗಸ್ಟ್ 2022 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.