ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಸಾಧಿಸುವುದಾಗಿ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಳಿಗ್ಗೆ 10 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ನಡೆಯಲಿದೆ. 6 ಗಂಟೆಗೆ ಮತ ಎಣಿಕೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಂಸದೆ ಕಂಗನಾ ರನೌತ್ ಸೇರಿದಂತೆ ಹಲವು ಕೇಂದ್ರ ಸಚಿವರು, ಸಂಸದರು ಮತ್ತು ರಾಜ್ಯಸಭಾ ಸದಸ್ಯರು ಮತದಾನ ಮಾಡಿದ್ದಾರೆ.
ಈ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ ಎಂಬ ಭರವಸೆ ಇದೆ ಎಂದು ರೆಡ್ಡಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. 'ನನಗೆ ಸಿಕ್ಕಿರುವ ಪ್ರೀತಿ, ನಾಗರಿಕ ಸಮಾಜದಿಂದ ಬಂದ ಪ್ರತಿಕ್ರಿಯೆಗಾಗಿ ಧನ್ಯವಾದ ಹೇಳುತ್ತೇನೆ. ಎದುರಾಳಿ ಪಕ್ಷದ ನಾಯಕರಿಗೂ ನಾನು ಧನ್ಯವಾದ ಹೇಳುತ್ತೇನೆ" ಎಂದು ಅವರು ಹೇಳಿದರು.
ಜನರ ಆತ್ಮಸಾಕ್ಷಿಯನ್ನು ಜಾಗೃತಗೊಳಿಸಲು ಮಾತ್ರ ಪ್ರಯತ್ನಿಸುತ್ತಿದ್ದೇನೆ ಮತ್ತು ಯಾವುದೇ ಅಡ್ಡ ಮತದಾನ ಸಂಭವಿಸುತ್ತದೆ ಎಂದು ನಿರೀಕ್ಷಿಸುವುದಿಲ್ಲ ಎಂದು ಹೇಳುವ ಮೂಲಕ ರೆಡ್ಡಿ ಅಡ್ಡ ಮತದಾನದ ಯಾವುದೇ ಭರವಸೆಯನ್ನು ತಳ್ಳಿಹಾಕಿದ್ದಾರೆ.
‘ನಾನು ಜನರ ಆತ್ಮಸಾಕ್ಷಿಯನ್ನು ಜಾಗೃತಗೊಳಿಸಲು ಮಾತ್ರ ಪ್ರಯತ್ನಿಸುತ್ತಿದ್ದೇನೆ. ಅಡ್ಡ ಮತದಾನ ನಡೆಯುತ್ತದೆ ಎಂದು ನಾನು ಎಂದೂ ಹೇಳಿಲ್ಲ. ಅಡ್ಡ ಮತದಾನ ಎಂದರೇನು? ಎಂದು ನನಗೆ ತಿಳಿದಿಲ್ಲ’ ಎಂದು ಅವರು ಹೇಳಿದ್ದಾರೆ.
ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಬಹುಮತದಿಂದ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ ಎಂದು ಕೇಳಿದಾಗ, ಅವರು ಇನ್ನೇನು ಹೇಳುತ್ತಾರೆ? ಸುದರ್ಶನ್ ರೆಡ್ಡಿ ಗೆಲ್ಲುತ್ತಾರೆ ಎಂದು ಹೇಳುತ್ತಾರಾ? ಹೇಳಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯಾದ ರೆಡ್ಡಿ, ಫಲಿತಾಂಶ ಏನೇ ಬರಲಿ ಸಂವಿಧಾನಕ್ಕಾಗಿ ಹೋರಾಡುವುದನ್ನು ಮುಂದುವರಿಸುವುದಾಗಿ ಹೇಳಿದರು.
ಜಗದೀಪ್ ಧನಕರ್ ಅವರು ಆರೋಗ್ಯ ಕಾರಣಗಳನ್ನು ನೀಡಿ ಜುಲೈ 21ರಂದು ರಾಜೀನಾಮೆ ನೀಡಿದ 50 ದಿನಗಳ ನಂತರ ಈ ಚುನಾವಣೆ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.