ADVERTISEMENT

ದೇವೇಗೌಡರ ಆರೋಗ್ಯ ವಿಚಾರಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಡಿಸೆಂಬರ್ 2022, 7:55 IST
Last Updated 7 ಡಿಸೆಂಬರ್ 2022, 7:55 IST
ಜಗದೀಪ್ ಧನಕರ್‌, ದೇವೇಗೌಡ
ಜಗದೀಪ್ ಧನಕರ್‌, ದೇವೇಗೌಡ   

ನವದೆಹಲಿ:ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರು ಬುಧವಾರ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಆರೋಗ್ಯ ವಿಚಾರಿಸಿದ್ದಾರೆ.

ಇಲ್ಲಿನ ಸಂಸದರ ನಿವಾಸದಲ್ಲಿ ಉಪರಾಷ್ಟ್ರಪತಿಗಳು ದೇವೇಗೌಡರನ್ನು ಭೇಟಿ ಮಾಡಿದರು.

ಈ ಕುರಿತು ಟ್ವೀಟ್ ಮಾಡಿರುವ ದೇವೇಗೌಡರು, ನನ್ನ ಆರೋಗ್ಯ ವಿಚಾರಿಸಲು ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರಿಗೆ ನಮನಗಳು.ಅವರು ನನ್ನ ಸ್ನೇಹಿತರಾಗಿದ್ದು, ಅವರೂ ಸಹ ನನ್ನಂತೆಯೇ ರೈತ ಕುಟುಂಬದಿಂದ ಬಂದಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ದೇವೇಗೌಡರು ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.