ADVERTISEMENT

ಕುಮಾವೂನ್‌ ವಿವಿ ಸುವರ್ಣ ಮಹೋತ್ಸವ: ಮೂರ್ಛೆ ಹೋದ ಉಪರಾಷ್ಟ್ರಪತಿ ಧನಕರ್‌

ಪಿಟಿಐ
Published 25 ಜೂನ್ 2025, 13:31 IST
Last Updated 25 ಜೂನ್ 2025, 13:31 IST
<div class="paragraphs"><p>ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಮೂರ್ಛೆ ಹೋಗಿದ್ದ ಸಂದರ್ಭ</p></div>

ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಮೂರ್ಛೆ ಹೋಗಿದ್ದ ಸಂದರ್ಭ

   

–ಪಿಟಿಐ ಚಿತ್ರ

ನೈನಿತಾಲ್‌: ಉತ್ತರಾಖಂಡದ ನೈನಿತಾಲ್‌ನ ಕುಮಾವೂನ್‌ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಮೂರ್ಛೆ ಹೋಗಿದ್ದಾರೆ.

ADVERTISEMENT

ಜಗದೀಪ್‌ ಧನಕರ್‌ ಅವರು ಭಾಷಣ ಮುಗಿಸಿ ವೇದಿಕೆಯತ್ತ ಬರುತ್ತಿದ್ದಂತೆ ಮೂರ್ಛೆ ಹೋಗಿದ್ದು, ಕೂಡಲೇ ಸ್ಥಳದಲ್ಲಿದ್ದ ಅಧಿಕಾರಿಯೊಬ್ಬರು ಅವರನ್ನು ಹಿಡಿದುಕೊಂಡಿದ್ದಾರೆ. ಕೆಲವು ನಿಮಿಷಗಳ ನಂತರ ಚೇತರಿಸಿಕೊಂಡ ಅವರು ತಮ್ಮ ಮಾಜಿ ಸಂಸದೀಯ ಸಹೋದ್ಯೋಗಿ ಮಹೇಂದ್ರ ಸಿಂಗ್ ಪಾಲ್ ಅವರನ್ನು ಅಪ್ಪಿಕೊಂಡು ಭಾವುಕರಾಗಿದ್ದಾರೆ.

ಸ್ಥಳದಲ್ಲಿದ್ದ ವೈದ್ಯರ ತಂಡ ಜಗದೀಪ್‌ ಅವರ ಆರೋಗ್ಯ ತಪಾಸಣೆ ನಡೆಸಿದೆ. ಸದ್ಯ ಚೇತರಿಸಿಕೊಂಡಿರುವ ಅವರು ಉತ್ತರಾಖಂಡ ರಾಜಭವನಕ್ಕೆ ತೆರಳಿದ್ದಾರೆ. ಇಂದು ಅಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.