ADVERTISEMENT

ಮೂರನೇ ಚಾರ್ಲ್ಸ್‌ ಪಟ್ಟಾಭಿಷೇಕದಲ್ಲಿ ಭಾಗಿಯಾಗಲಿರುವ ಉಪರಾಷ್ಟ್ರಪತಿ ಧನಕರ್‌

ಮೇ 5 ಹಾಗೂ 6 ರಂದು ನಡೆಯುವ ಬ್ರಿಟನ್‌ ದೊರೆ ಮೂರನೇ ಚಾರ್ಲ್ಸ್‌ ಅವರ ಪಟ್ಟಾಭಿಷೇಕ ಸಮಾರಂಭದಲ್ಲಿ ಭಾರತದ ಪ‍್ರತಿನಿಧಿಯಾಗಿ ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರು ಭಾಗವಹಿಸಲಿದ್ದಾರೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಮೇ 2023, 16:12 IST
Last Updated 2 ಮೇ 2023, 16:12 IST
ಜಗದೀಪ್‌ ಧನಕರ್‌ 
ಜಗದೀಪ್‌ ಧನಕರ್‌    

ನವದೆಹಲಿ: ಮೇ 5 ಹಾಗೂ 6 ರಂದು ನಡೆಯುವ ಬ್ರಿಟನ್‌ ದೊರೆ ಮೂರನೇ ಚಾರ್ಲ್ಸ್‌ ಅವರ ಪಟ್ಟಾಭಿಷೇಕ ಸಮಾರಂಭದಲ್ಲಿ ಭಾರತದ ಪ‍್ರತಿನಿಧಿಯಾಗಿ ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.

ಭಾರತ ಹಾಗೂ ಯುಕೆ ನಡುವೆ ಐತಿಹಾಸಿಕ ಸಂಬಂಧ ಇದ್ದು, ಪ್ರಜಾಪ್ರಭುತ್ವದ ಮೌಲ್ಯ, ಆಡಳಿತ ಹಾಗೂ ಅನೇಕ ವಿಷಯಗಳನ್ನು ಹಂಚಿಕೊಂಡಿದೆ ಎಂದು ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.

ರಾಣಿ ಎರಡನೇ ಎಲಿಜಬೆತ್‌ ನಿಧನರಾದಾಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಂಡನ್‌ಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.