ADVERTISEMENT

ರಾಷ್ಟ್ರಪತಿ ಚುನಾವಣೆ: ವೆಂಕಯ್ಯ ನಾಯ್ಡು ಎನ್‌ಡಿಎ ಅಭ್ಯರ್ಥಿ?

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 10:59 IST
Last Updated 21 ಜೂನ್ 2022, 10:59 IST
ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು   

ನವದೆಹಲಿ:ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಮಹತ್ವದ ಸಭೆಗೂ ಮುನ್ನ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್ ಸಿಂಗ್‌ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಇದರಿಂದಾಗಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೇ,ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಯ ಮೈತ್ರಿಕೂಟದ ಅಭ್ಯರ್ಥಿಯಾಗಲಿದ್ದಾರೆಯೇ ಎನ್ನಲಾಗುತ್ತಿದೆ.

ರಾಷ್ಟ್ರಪತಿ ಚುನಾವಣೆಯು ಜುಲೈ 18ರಂದು ನಡೆಯಲಿದೆ. ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆಇದೇ ದಿನ (ಮಂಗಳವಾರ) ಸಂಸದೀಯ ಪಕ್ಷದ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ವರ್ಚುವಲ್‌ ಆಗಿ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಅದಕ್ಕೂ ಮುನ್ನ ಬಿಜೆಪಿ ನಾಯಕರು ನಾಯ್ಡು ಜೊತೆ ನಡೆಸಿರುವ ಮಾತುಕತೆ ಮಹತ್ವ ಪಡೆದುಕೊಂಡಿದೆ.

ಚುನಾವಣೆ ಸಂಬಂಧ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲು ನಡ್ಡಾ ಅವರು ಪಕ್ಷದ 14 ಸದಸ್ಯರನ್ನೊಳಗೊಂಡ ಉಸ್ತುವಾರಿ ಸಮಿತಿಯೊಂದಿಗೆ ಸೋಮವಾರ ಸಭೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.