
ಪಿಟಿಐ
ನವದೆಹಲಿ: ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಮಂಗಳವಾರ ಭೇಟಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೌಲಾನಾ ಆಜಾದ್ ರಸ್ತೆಯಲ್ಲಿರುವ ಉಪ ರಾಷ್ಟ್ರಪತಿ ನಿವಾಸದಲ್ಲಿ ಇಬ್ಬರು ಭೇಟಿಯಾಗಿದ್ದಾರೆ. ಇದು ರಾಧಾಕೃಷ್ಣನ್ ಅವರು ಅಧಿಕಾರ ವಹಿಸಿಕೊಂಡ ನಂತರ, ಜಗದೀಪ್ ಧನಕರ್ ಅವರೊಂದಿಗಿನ ಮೊದಲ ಅಧಿಕೃತ ಭೇಟಿಯಾಗಿದೆ.
ರಾಷ್ಟ್ರಪತಿ ಭವನದಲ್ಲಿ ಸೆಪ್ಟೆಂಬರ್‌ನಲ್ಲಿ ಜರುಗಿದ ಸಿ.ಪಿ. ರಾಧಾಕೃಷ್ಣನ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಇಬ್ಬರು ಜೊತೆಯಲ್ಲಿ ಕಾಣಿಸಿಕೊಂಡಿದ್ದರು.
ಜಗದೀಪ್ ಧನಕರ್ ಅವರು ಅನಾರೋಗ್ಯದ ಕಾರಣ ಜುಲೈ 21ರಂದು ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಸಿ.ಪಿ. ರಾಧಾಕೃಷ್ಣನ್ ಅವರು ಗೆಲುವು ಸಾಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.