ಜಗದೀಪ್ ಧನಕರ್
(ಪಿಟಿಐ ಚಿತ್ರ)
ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆ ಆಘಾತಕಾರಿಯಾಗಿದ್ದು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಮೊದಲೇ ಮಾಹಿತಿ ಇತ್ತೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಲೋಕಸಭೆಯ ಕಾಂಗ್ರೆಸ್‌ನ ಉಪ ನಾಯಕ ಗೌರವ್ ಗೊಗೋಯಿ ಆಗ್ರಹಿಸಿದ್ದಾರೆ.
ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಭಾಗಿಯಾಗಿದ್ದ ರಾಜ್ಯಸಭೆಯ ಸಭಾಪತಿಯೂ ಆಗಿರುವ ಧನಕರ್, ವೈದ್ಯಕೀಯ ಕಾರಣಗಳನ್ನು ನೀಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಗೊಗೋಯಿ, 'ಧನಕರ್ ಅವರು ಉಪ ರಾಷ್ಟ್ರಪತಿ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿರುವುದು ಆಘಾತಕಾರಿಯಾಗಿದೆ. ಅವರಿಗೆ ಉತ್ತಮ ಆರೋಗ್ಯ ಬಯಸುತ್ತೇನೆ' ಎಂದು ಹೇಳಿದ್ದಾರೆ.
'ಆದರೆ ಧನಕರ್ ರಾಜೀನಾಮೆ ಕುರಿತು ಕೇಂದ್ರ ಸರ್ಕಾರಕ್ಕೆ ಮೊದಲೇ ಮಾಹಿತಿ ಇತ್ತೇ? ಅವರ ನಿರ್ಗಮನದ ಬಳಿಕ ನೂತನ ಉಪ ರಾಷ್ಟ್ರಪತಿಯವರ ಸುಗಮವಾದ ಆಯ್ಕೆಗೆ ಯೋಜನೆ ರೂಪಿಸಲಾಗಿತ್ತೇ ಎಂಬುದನ್ನು ಸ್ಪಷ್ಟಪಡಿಸಬೇಕಿದೆ' ಎಂದು ಅವರು ಹೇಳಿದ್ದಾರೆ.
ಸೋಮವಾರ ಉಪ ರಾಷ್ಟ್ರಪತಿಯವರ ಅಧ್ಯಕ್ಷತೆಯಲ್ಲಿ ನಡೆದ ಚರ್ಚೆಯಲ್ಲಿ ಇಬ್ಬರು ಹಿರಿಯ ಸಚಿವರು ಗೈರು ಹಾಜರಾಗಿರುವುದು ಮತ್ತಷ್ಟು ಮಹತ್ವವನ್ನು ಪಡೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.