ಜಗದೀಪ್ ಧನಕರ್, ಸಿ.ಪಿ.ರಾಧಾಕೃಷ್ಣನ್
(ಪಿಟಿಐ ಚಿತ್ರ)
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಜಗದೀಪ್ ಧನಕರ್ ಮೊದಲ ಬಾರಿಗೆ ಇಂದು (ಶುಕ್ರವಾರ) ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ಉಪರಾಷ್ಟ್ರಪತಿಯಾಗಿ ಚುನಾಯಿತರಾಗಿರುವ ಸಿ.ಪಿ.ರಾಧಾಕೃಷ್ಣನ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಧನಕರ್ ಪಾಲ್ಗೊಂಡಿದ್ದು, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದ್ದಾರೆ.
ಈ ಸಂಬಂಧ ಸುದ್ದಿ ಸಂಸ್ಥೆ 'ಎಎನ್‌ಐ' ವಿಡಿಯೊವನ್ನು ಹಂಚಿಕೊಂಡಿದೆ.
ಅನಾರೋಗ್ಯದ ಕಾರಣ ನೀಡಿ ಜುಲೈ 21ರಂದು ಉಪರಾಷ್ಟ್ರಪತಿ ಹುದ್ದೆಗೆ ಧನಕರ್ ರಾಜೀನಾಮೆ ಸಲ್ಲಿಸಿದ್ದರು. ಅದಾದ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.
ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಸಿ.ಪಿ.ರಾಧಾಕೃಷ್ಣನ್ ಚುನಾಯಿತರಾಗಿದ್ದರು.
ಸೆ. 9ರಂದು ನಡೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಅವರು, ವಿರೋಧ ಪಕ್ಷಗಳ ಅಭ್ಯರ್ಥಿ ಬಿ. ಸುದರ್ಶನ ರೆಡ್ಡಿ ಅವರಿಗಿಂತ 152 ಹೆಚ್ಚು ಮತಗಳನ್ನು ಪಡೆದು ಜಯಗಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.