ADVERTISEMENT

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೋವಿಡ್‌ನಿಂದ ಗುಣಮುಖ

ಏಜೆನ್ಸೀಸ್
Published 12 ಅಕ್ಟೋಬರ್ 2020, 12:50 IST
Last Updated 12 ಅಕ್ಟೋಬರ್ 2020, 12:50 IST
ಎಂ. ವೆಂಕಯ್ಯ ನಾಯ್ಡು
ಎಂ. ವೆಂಕಯ್ಯ ನಾಯ್ಡು   

ನವದೆಹಲಿ: ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಸೋಮವಾರ ತಿಳಿಸಿದೆ.

‘ಏಮ್ಸ್‌ನ ವೈದ್ಯಕೀಯ ತಂಡವು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಆರೋಗ್ಯ ತಪಾಸಣೆ ನಡೆಸಿದೆ. ಅವರಿಗೆ ಕೋವಿಡ್ ನೆಗೆಟಿವ್ ಬಂದಿದೆ. ಸೆಪ್ಟೆಂಬರ್‌ 29ರಂದು ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಅವರು ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದರು’ ಎಂದು ಉಪರಾಷ್ಟ್ರಪತಿ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

‘ನಾಯ್ಡು ಅವರ ಆರೋಗ್ಯ ಉತ್ತಮವಾಗಿದೆ. ವೈದ್ಯಕೀಯ ಸಲಹೆಯಂತೆ ಶೀಘ್ರದಲ್ಲೇ ಸಾಮಾನ್ಯ ಚಟುವಟಿಕೆಗಳನ್ನು ಆರಂಭಿಸಲಿದ್ದಾರೆ’ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.