ADVERTISEMENT

ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ಗೆ ಗೆಲುವು 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಆಗಸ್ಟ್ 2022, 14:42 IST
Last Updated 6 ಆಗಸ್ಟ್ 2022, 14:42 IST
ಜಗದೀಪ್ ಧನಕರ್‌ ಮತ್ತು ಮಾರ್ಗರೇಟ್ ಆಳ್ವಾ
ಜಗದೀಪ್ ಧನಕರ್‌ ಮತ್ತು ಮಾರ್ಗರೇಟ್ ಆಳ್ವಾ   

ನವದೆಹಲಿ: ಇಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ ಗೆಲುವು ಸಾಧಿಸಿದ್ದಾರೆ.

ದೆಹಲಿಯ ಸಂಸತ್ ಭವನದಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ಚುನಾವಣೆ ನಡೆದಿದ್ದು, ನಂತರ ಮತ ಎಣಿಕೆ ನಡೆಸಲಾಯಿತು.

ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಒಟ್ಟು 780 ಸಂಸದರಿದ್ದು, 725 ಮಂದಿ ಮತದಾನ ಮಾಡಿದ್ದರು.

ADVERTISEMENT

ಒಟ್ಟು ಚಲಾವಣೆಯಾದ 725 ಮತಗಳ ಪೈಕಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ 528 ಮತಗಳನ್ನು ಪಡೆದಿದ್ದಾರೆ. ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವಾ 182 ಮತಗಳನ್ನು ಪಡೆದಿದ್ದಾರೆ.

ಇದರೊಂದಿಗೆ ಧನಕರ್ ಅವರು 346 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. 15 ಮತಗಳನ್ನು ಅಸಿಂಧು ಎಂದು ಘೋಷಿಸಲಾಗಿದೆ ಎಂದು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ರಾಜ್ಯಸಭೆ ಚುನಾಯಿತ ಮತ್ತು ನಾಮನಿರ್ದೇಶಿತ ಸದಸ್ಯರು ಹಾಗೂ ಲೋಕಸಭೆ ಚುನಾಯಿತ ಸದಸ್ಯರನ್ನು ಒಳಗೊಂಡಂತೆ 780 ಮತದಾರರಲ್ಲಿ 725 ಮತದಾರರು ತಮ್ಮ ಮತ ಚಲಾಯಿಸಿದ್ದಾರೆ. ಶೇ 92.94ರಷ್ಟು ಮತದಾನವಾಗಿದೆ ಎಂದು ಉತ್ಪಲ್ ಕುಮಾರ್ ಸಿಂಗ್ ಹೇಳಿದ್ದಾರೆ.

ಈ ಮೂಲಕ ಜಗದೀಪ್ ಧನಕರ್ ಅವರು ಭಾರತದ 14ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.