ADVERTISEMENT

VIDEO | J&K ಜಗತ್ತಿನ ಅತಿ ಎತ್ತರದ ಉಕ್ಕಿನ ಕಮಾನು ಸೇತುವೆ ಮೇಲೆ ಓಡಿದ ಭಾರತ ರೈಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜನವರಿ 2025, 10:42 IST
Last Updated 7 ಜನವರಿ 2025, 10:42 IST

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಚೆನಾಬ್‌ ನದಿ ಮೇಲೆ ನಿರ್ಮಿಸಿರುವ ಜಗತ್ತಿನ ಅತಿ ಎತ್ತರದ ಉಕ್ಕಿನ ಕಮಾನು ಸೇತುವೆ ಮೇಲೆ ರೈಲ್ವೆ ಇಲಾಖೆಯು ಪ್ರಾಯೋಗಿಕವಾಗಿ ರೈಲು ಓಡಿಸಿತು. ಈ ಪ್ರಯೋಗ ಯಶಸ್ವಿಯಾಯಿತು ಎಂದು ಇಲಾಖೆ ತಿಳಿಸಿದೆ. 1.3 ಕಿ.ಮೀ ಉದ್ದದ ಸೇತುವೆಯು ನದಿಪಾತ್ರದಿಂದ 359 ಮೀಟರ್‌ ಎತ್ತರದಲ್ಲಿದೆ. ಅಂದರೆ ವಿಶ್ವವಿಖ್ಯಾತ ಫ್ರಾನ್ಸ್‌ನ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರವಿದೆ. ಉಧಂಪುರ–ಶ್ರೀನಗರ–ಬಾರಾಮುಲ್ಲಾ ರೈಲು ಸಂಪರ್ಕದ ಭಾಗವಾಗಿ ಈ ಸೇತುವೆ ನಿರ್ಮಾಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.