ಹೈದರಾಬಾದ್: ಆಂಧ್ರಪ್ರದೇಶದ ಶ್ರೀಶೈಲ ನಗರದ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಮೊದಲು ದೇವಾಲಯದಲ್ಲಿರುವ ಗಣಪತಿಗೆ ಪೂಜೆ ಸಲ್ಲಿಸಿದರು. ಬಳಿಕ ನಾಯ್ಡು, ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದೇವಾಲಯದಲ್ಲಿ 'ರುದ್ರ ಹೋಮ ಪೂರ್ಣಾಹುತಿ ಪೂಜೆಯಲ್ಲಿ ನಾಯ್ಡು ಭಾಗವಹಿಸದ್ದಾರೆ.
ದೇವಸ್ಥಾನದ ಬಳಿಯ ಗೋವುಗಳಿಗೆ ಆಹಾರ ನೀಡಿ, ಬಳಿಕ ಕೃಷ್ಣಾ ನದಿಯ ಬಳಿ ನಡೆದ ‘ಜಲ ಆರತಿ‘ ಕಾರ್ಯಕ್ರಮದಲ್ಲಿ ಚಂದ್ರಬಾಬು ನಾಯ್ಡು ಭಾಗಿಯಾಗಿ ಪ್ರಾರ್ಥಿಸಿದ್ದಾರೆ.
ಈ ವೇಳೆ ಸಚಿವರು, ದೇವಾಲಯದ ಆಡಳಿತ ಮಂಡಳಿಯ ಸದಸ್ಯರು, ಸೇರಿದಂತೆ ಟಿಡಿಪಿ ಕಾರ್ಯಕರ್ತರು ನಾಯ್ಡು ಅವರಿಗೆ ಸಾಥ್ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.