ADVERTISEMENT

ಲೋಕಸಭಾ ಚುನಾವಣೆ | ಮಸೀದಿಯತ್ತ ಬಾಣದ ಸನ್ನೆ: ವಿವಾದ

ಪಿಟಿಐ
Published 18 ಏಪ್ರಿಲ್ 2024, 16:16 IST
Last Updated 18 ಏಪ್ರಿಲ್ 2024, 16:16 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಹೈದರಾಬಾದ್‌: ಹೈದರಾಬಾದ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡಿದ ವಿಡಿಯೊವೊಂದು ಬಹಿರಂಗವಾಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಬುಧವಾರ ನಡೆದ ರಾಮನವಮಿ ಮೆರವಣಿಗೆ ಸಂದರ್ಭದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ಬಗ್ಗೆ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ಮಾಧವಿ, ‘ಅದು ಅಪೂರ್ಣ ವಿಡಿಯೊ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಆ ವಿಡಿಯೊ ಕಾರಣದಿಂದ ಯಾರ ಭಾವನೆಗಾದರೂ ನೋವು ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಎಲ್ಲರ ಭಾವನೆಗಳನ್ನು ಗೌರವಿಸುವವಳು ನಾನು’ ಎಂದು ಹೇಳಿದ್ದಾರೆ.

ADVERTISEMENT

‘ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು ಜನರ ಮಧ್ಯೆ ಒಡಕು ಮೂಡಿಸಿ ಬ್ರಾಂಡ್‌ ಹೈದರಾಬಾದ್‌ ಪರಿಕಲ್ಪನೆಗೆ ಧಕ್ಕೆ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ’ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.