ADVERTISEMENT

ಮುಂದೆ ಒಬ್ಬಳು, ಹಿಂದೆ ಒಬ್ಬಳನ್ನು ಕೂರಿಸಿಕೊಂಡು ಸ್ಟಂಟ್‌ ಮಾಡಿ ಪೊಲೀಸರ ಅತಿಥಿಯಾದ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2023, 9:11 IST
Last Updated 3 ಏಪ್ರಿಲ್ 2023, 9:11 IST
ಬೈಕ್‌ ಸ್ಟೆಂಟ್‌
ಬೈಕ್‌ ಸ್ಟೆಂಟ್‌    

ಮುಂಬೈ: ಹೆಲ್ಮೆಟ್‌ ಧರಿಸದೇ ಮುಂದೆ ಒಬ್ಳು, ಹಿಂದೆ ಒಬ್ಳು ಹುಡುಗೀನ ಕೂರಿಸಿಕೊಂಡು ರಸ್ತೆಯಲ್ಲಿ ಬೈಕ್‌ ಸ್ಟಂಟ್‌ ಮಾಡಿದ್ದ ಯುವಕ ಪೊಲೀಸರ ಅತಿಥಿಯಾಗಿದ್ದಾನೆ.

ಯುವಕನೊಬ್ಬ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ ಪ್ರದೇಶದಲ್ಲಿ ಇಬ್ಬರು ಹುಡುಗಿಯರನ್ನು ಕೂರಿಸಿಕೊಂಡು ಬೈಕ್ ಸ್ಟಂಟ್ ಮಾಡಿದ್ದ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

ವಿಡಿಯೊ ಗಮನಿಸಿದ ಪೊಲೀಸರು ಬೈಕ್‌ ಸ್ಟಂಟ್‌ ಮಾಡಿದ್ದ ಯುವಕನನ್ನು ಬಂಧಿಸಿದ್ದಾರೆ. ಬಂಧಿತ ಯುವಕ ಅಪರಾಧದ ಹಿನ್ನೆಲೆ ಹೊಂದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಬೈಕ್‌ ಸ್ಟಂಟ್‌ ಮಾಡುವಾಗ ಯುವಕ ಸೇರಿದಂತೆ ಇಬ್ಬರು ಹುಡುಗಿಯರು ಕೂಡ ಹೆಲ್ಮೆಟ್‌ ಹಾಕಿರಲಿಲ್ಲ. ಅವರ ವಿರುದ್ಧ ಕೂಡ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಬೈಕ್‌ ಸ್ಟಂಟ್‌ ಮಾಡಿದ ಯುವಕ ಹಾಗೂ ಇಬ್ಬರು ಹುಡುಗಿಯರ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ದಿನಗಳಲ್ಲಿ ನಗರದ ವಿವಿಧೆಡೆಗಳಲ್ಲಿ ಬೈಕ್ ವ್ಹೀಲಿಂಗ್ ಮಾಡಿದ್ದ 12 ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.