ADVERTISEMENT

ಅಹಮದಾಬಾದ್: ಲೇಕ್ ಗಾರ್ಡನ್‌ನಲ್ಲಿ 'ನಮಾಜ್'; ಶುದ್ಧೀಕರಣ ನಡೆಸಿದ ವಿಎಚ್‌ಪಿ

ಪಿಟಿಐ
Published 17 ನವೆಂಬರ್ 2021, 10:09 IST
Last Updated 17 ನವೆಂಬರ್ 2021, 10:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಹಮದಾಬಾದ್: ಅಹಮದಾಬಾದ್‌ನ ವಸ್ತ್ರಾಪುರ ಪ್ರದೇಶದ ಲೇಕ್ ಗಾರ್ಡನ್‌ನಲ್ಲಿ ಕೆಲವು ಮುಸ್ಲಿಮರು ನಮಾಜ್ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾರ್ಯಕರ್ತರು ಪ್ರದೇಶದಲ್ಲಿ ಶುದ್ಧೀಕರಣ ನಡೆಸಿರುವ ಘಟನೆ ವರದಿಯಾಗಿದೆ.

ಕೆಲವು ದಿನಗಳ ಹಿಂದೆ, ವಸ್ತ್ರಾಪುರ ಲೇಕ್ ಗಾರ್ಡನ್‌ನಲ್ಲಿ ಮಹಿಳೆಯರು ಸೇರಿದಂತೆ ಆರು ಮಂದಿ ಮುಸ್ಲಿಮರು ನಮಾಜ್ ನಡೆಸಿದ್ದರು ಎನ್ನಲಾಗಿದೆ. ಪ್ರಸ್ತುತ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಮತ್ತು ಶುದ್ಧೀಕರಣಕ್ಕೆ ಸಂಬಂಧಿಸಿದಂತೆ ಯಾರೂ ಸಂಪರ್ಕಿಸಿಲ್ಲ ಎಂದು ವಸ್ತ್ರಾಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಂದೀಪ್ ಖಂಬ್ಲಾ ತಿಳಿಸಿದ್ದಾರೆ.

ಕೆರೆಯ ಸಮೀಪವಿರುವ ಬಹುಮಹಡಿ ಕಟ್ಟಡದ ನಿವಾಸಿಯೊಬ್ಬರು ಈ ವಿಡಿಯೊವನ್ನು ಚಿತ್ರೀಕರಿಸಿರಬಹುದು ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ಆಗಮಿಸಿರುವ ವಿಎಚ್‌ಪಿ ಕಾರ್ಯಕರ್ತರು ಮಂತ್ರಗಳನ್ನು ಪಠಿಸಿ ಗಂಗಾಜಲವನ್ನು ಸಿಂಪಡಿಸಿ ಶುದ್ಧೀಕರಣ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.