ADVERTISEMENT

ಬಿಹಾರ: ಹಳಿ ದಾಟುವಾಗ ರೈಲಿನಡಿ ಸಿಲುಕಿದ ಮಹಿಳೆ, ಮುಂದೆನಾಯ್ತು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಫೆಬ್ರುವರಿ 2023, 7:43 IST
Last Updated 11 ಫೆಬ್ರುವರಿ 2023, 7:43 IST
ರೈಲಿನಡಿ ಮಹಿಳೆ ಸಿಲುಕಿರುವ ದೃಶ್ಯ (ಟ್ವಿಟರ್ ಚಿತ್ರ)
ರೈಲಿನಡಿ ಮಹಿಳೆ ಸಿಲುಕಿರುವ ದೃಶ್ಯ (ಟ್ವಿಟರ್ ಚಿತ್ರ)   

ಪಟ್ನಾ: ಬಿಹಾರದ ಗಯಾದಲ್ಲಿ ರೈಲು ಹಳಿ ದಾಟುತ್ತಿದ್ದ ವೇಳೆ ನಿಂತದ್ದ ರೈಲು ಹಠಾತ್ತನೆ ಚಲಿಸಲು ಪ್ರಾರಂಭಿಸಿದ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಯಾದ ಟಂಕುಪ್ಪಾ ರೈಲು ನಿಲ್ದಾಣದಲ್ಲಿ ಈ ಘಟನೆ ವರದಿಯಾಗಿದೆ.

ಪ್ಲಾಟ್‌ಫಾರ್ಮ್‌ನ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋಗಲು ಹಳಿ ದಾಟುವ ಸಂದರ್ಭದಲ್ಲಿ ರೈಲು ಏಕಾಏಕಿ ಚಲಿಸಲು ಆರಂಭಿಸಿದೆ. ಇದರಿಂದಾಗಿ ಮಹಿಳೆ ಗಾಬರಿಗೊಂಡಿದ್ದು, ಹಳಿ ಮೇಲೆ ಮಲಗಿಕೊಂಡಿದ್ದಾರೆ. ರೈಲು ಚಲಿಸಿದ ಬಳಿ ಕೂಡಲೇ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮಹಿಳೆಯ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.