
ಪ್ರಜಾವಾಣಿ ವಾರ್ತೆ
ಚೆನ್ನೈ: ‘ಪದ್ಮಶ್ರೀ’ ಪ್ರಶಸ್ತಿಗೆ ಭಾಜನರಾದ ನಿವೃತ್ತ ಐಪಿಎಸ್ ಅಧಿಕಾರಿ ಕೆ. ವಿಜಯ್ ಕುಮಾರ್ ಅವರು ಕಾಡುಗಳ್ಳ ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯಿಂದ ಹೆಸರುವಾಸಿಯಾಗಿದ್ದಾರೆ.
2004ರಲ್ಲಿ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಾಪರಪಟ್ಟಿ ಬಳಿ ತಮಿಳುನಾಡಿನ ಆಗಿನ ಎಸ್‌ಟಿಎಫ್ ಮುಖ್ಯಸ್ಥರಾಗಿದ್ದ ವಿಜಯ್‌ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ವೀರಪ್ಪನ್‌ನನ್ನು ಹತ್ಯೆ ಮಾಡಿತ್ತು.
73 ವರ್ಷದ ಅವರು 2010ರಿಂದ ಎರಡು ವರ್ಷ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನೇತೃತ್ವ ವಹಿಸಿದ್ದರು. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಡೆದ ಕಾರ್ಯಾಚರಣೆಗಳಲ್ಲಿ ಕೇಂದ್ರ ಗೃಹ ಸಚಿವಾಲಯಕ್ಕೆ ಸಲಹೆಗಾರ ರಾಗಿಯೂ ಕೆಲಸ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.