ನವದೆಹಲಿ: ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ್‌ಮಲ್ಯ, ಇದನ್ನು ಪ್ರಶ್ನಿಸಿಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಯು.ಯು.ಲಲಿತ್ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಅಕ್ಟೋಬರ್ 5ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಮಲ್ಯಗೆ ಸೂಚಿಸಿದೆ. 2017ರ ಮೇ 9ರಂದು ತಾನು ನೀಡಿದ್ದ ಆದೇಶದಲ್ಲಿ ಯಾವುದೇ ದೋಷವಿಲ್ಲ ಎಂದೂ ಹೇಳಿದೆ.
ವಿವಿಧ ನ್ಯಾಯಾಂಗ ಆದೇಶಗಳನ್ನು ಉಲ್ಲಂಘಿಸಿಮಲ್ಯಅಂದಾಜು ₹299 ಕೋಟಿ ಹಣವನ್ನು ತಮ್ಮ ಮಕ್ಕಳಿಗೆ ಅಕ್ರಮವಾಗಿ ವರ್ಗಾಯಿಸಿದ್ದಾರೆ ಎಂದು ವಿವಿಧ ಬ್ಯಾಂಕುಗಳು ದೂರಿದ್ದವು. ನ್ಯಾಯಾಂಗ ನಿಂದನೆ ಪ್ರಕರಣದ ಅಡಿಯಲ್ಲಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಜೊತೆಗೆ ಮಕ್ಕಳ ಖಾತೆಗೆ ವರ್ಗಾಯಿಸಿರುವ ಹಣವನ್ನು ಹಿಂದಕ್ಕೆ ಪಡೆಯಬೇಕೆಂದು ಮನವಿ ಮಾಡಿದ್ದವು.
2017ರ ಮೇ 9ರಂದು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವುಮಲ್ಯತಪ್ಪಿತಸ್ಥ ಎಂದು ತೀರ್ಪು ನೀಡಿತ್ತು. ಇದರ ವಿರುದ್ಧಮಲ್ಯಮೇಲ್ಮನವಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.