
ಈರೋಡ್: ಇಲ್ಲಿ ಡಿಸೆಂಬರ್ 16ರಂದು ಆಯೋಜಿಸಲಾಗಿದ್ದ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಅವರ ಸಾರ್ವಜನಿಕ ಸಭೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಸಭೆಗೆ ಅನುಮತಿ ಕೋರಿ ಆಯೋಜಕರಾದ ಮಾಜಿ ಸಚಿವ ಕೆ.ಎ ಸೆಂಗೊಟ್ಟಿಯನ್ ಅವರು ಜಿಲ್ಲಾಡಳಿತ ಮತ್ತು ಪೊಲೀಸರಿಗೆ ಮನವಿ ಸಲ್ಲಿಸಿದ್ದರು. ಸಭೆಗೆ ನಿಗದಿಯಾಗಿದ್ದ ಏಳು ಎಕರೆ ಖಾಸಗಿ ಸ್ಥಳವನ್ನು ಪರಿಶೀಲಿಸಿದ ಪೊಲೀಸ್ ವರಿಷ್ಠಾಧಿಕಾರಿ ಸುಜಾತ ಅವರು ಅನುಮತಿ ನೀಡಲು ನಿರಾಕರಿಸಿದ್ದಾರೆ.
‘ಸಭೆಯಲ್ಲಿ 70 ಸಾವಿರ ಜನ ಭಾಗಿಯಾಗುವ ನಿರೀಕ್ಷೆಯಿದೆ ಎಂದು ಆಯೋಜಕರು ತಿಳಿಸಿದ್ದಾರೆ. ನಿಗದಿಪಡಿಸಿರುವ ಸ್ಥಳದಲ್ಲಿ ಅಷ್ಟು ಜನ ಸೇರಲು ಮತ್ತು ಅವರ ವಾಹನಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಹಾಗಾಗಿ ಅನುಮತಿ ನಿರಾಕರಿಸಿದ್ದೇವೆ ಮತ್ತು ಬೇರೆ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಿದ್ದೇವೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.