ಚೆನ್ನೈ: ‘ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರು ಕರೂರು ಜಿಲ್ಲೆಯಲ್ಲಿ ಶನಿವಾರ ನಡೆಸಿದ ರ‍್ಯಾಲಿಯಲ್ಲಿ ಕಾಲ್ತುಳಿತ ಉಂಟಾದ ಕಾರಣ ಉಸಿರುಗಟ್ಟಿ ಕನಿಷ್ಠ 39 ಮಂದಿ ಮೃತಪಟ್ಟಿದ್ದಾರೆ. ಘಟನೆಗೂ ಮುನ್ನ ಕಾರ್ಯಕರ್ತರ ಕಡೆ ವಿಜಯ್ ಕುಡಿಯುವ ನೀರಿನ ಬಾಟಲ್‌ಗಳನ್ನು ಎಸೆದಿದ್ದಾರೆ.
ಕಾಲ್ತುಳಿತಕ್ಕೆ ಕಾರಣವೇನು ಎಂಬ ಬಗ್ಗೆ ಟಿವಿಕೆ ಕಾರ್ಯಕರ್ತರಾಗಲಿ, ಪದಾಧಿಕಾರಿಗಳಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತ ಪೊಲೀಸರು ಕೂಡ ಕಾರಣವೇನು ಎಂಬುದನ್ನು ತಿಳಿಸಿಲ್ಲ.
6 ಗಂಟೆ ತಡವಾಗಿ ಬಂದ ವಿಜಯ್ ಜನರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಕೆಲವರು ನೀರನ್ನು ಕೇಳಿದರು. ವಿಜಯ್ ಜನರ ಕಡೆ ನೀರಿನ ಬಾಟಲ್‌ಗಳನ್ನು ಎಸೆದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ರ‍್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆ ಇದ್ದರೂ ಸಾಕಷ್ಟು ಪ್ರಮಾಣದಲ್ಲಿ ಭದ್ರತಾ ವ್ಯವಸ್ಥೆ ಕಲ್ಪಿಸುವಲ್ಲಿ ಆಯೋಜಕರು ಮತ್ತು ಜಿಲ್ಲಾ ಪೊಲೀಸರು ವಿಫಲರಾಗಿದ್ದೇ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಕಾಲ್ತುಳಿತಕ್ಕೆ ಕಾರಣವೇನು ಎಂಬುದರ ಬಗ್ಗೆ ಪ್ರತ್ಯಕ್ಷದರ್ಶಿಗಳು ಬೇರೆ ಬೇರೆ ಮಾಹಿತಿ ನೀಡಿದ್ದಾರೆ. ಆದರೆ ಘಟನೆಗೆ ನಿಖರ ಕಾರವೇನು ಎಂಬುವುದು ಸ್ಪಷವಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.