ವಿಜಯ್
(ಪಿಟಿಐ ಚಿತ್ರ)
ಚೆನ್ನೈ: ಕರೂರು ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದವರೊಂದಿಗೆ ವಾಟ್ಸ್ಆ್ಯಪ್ ವಿಡಿಯೊ ಕರೆ ಮೂಲಕ ಮಾತನಾಡಿರುವ ನಟ, ರಾಜಕಾರಣಿ ವಿಜಯ್, ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.
ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ, ನಟ ವಿಜಯ್ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ರ‍್ಯಾಲಿ ನಡೆಸಿದ್ದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 41 ಮಂದಿ ಮೃತಪಟ್ಟಿದ್ದರು.
ಆದರೆ ದುರಂತ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿಯಾಗದೇ ಇರುವುದು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ವಿಜಯ್ ಭೇಟಿಗೆ ಅನುಮತಿ ಸಹ ದೊರಕಿರಲಿಲ್ಲ.
ಸಂತ್ರಸ್ತ ಕುಟುಂಬದ ವ್ಯಕ್ತಿಯೊಬ್ಬರು ಮಾತನಾಡಿ, 'ವಿಜಯ್ ಅವರು ನನ್ನ ಅಳಿಯನಿಗೆ ಕರೆ ಮಾಡಿ ವಿಷಾದಿಸಿದ್ದಾರೆ. ತನ್ನೆಲ್ಲ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ' ಎಂದು ಹೇಳಿದ್ದಾರೆ.
ಮತ್ತೊಂದು ಕರೆಯಲ್ಲಿ ವಿಜಯ್, 'ನಾನು ನಿನ್ನ ಮಗ ಇದ್ದಂತೆ' ಎಂದು ಮಹಿಳೆಗೆ ಸಾಂತ್ವನ ಹೇಳಿದ್ದಾರೆ.
ಕರೂರಿಗೆ ಭೇಟಿ ನೀಡವಂತೆಯೂ ಪಕ್ಷದ ಕಾರ್ಯಕರ್ತರಿಗೂ ವಿಜಯ್ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.