ADVERTISEMENT

ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಸಕ್ಸೇನಾ ಪ್ರಮಾಣವಚನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಮೇ 2022, 6:41 IST
Last Updated 26 ಮೇ 2022, 6:41 IST
ವಿನಯ್ ಕುಮಾರ್ ಸಕ್ಸೇನಾ (ಟ್ವಿಟರ್ ಚಿತ್ರ)
ವಿನಯ್ ಕುಮಾರ್ ಸಕ್ಸೇನಾ (ಟ್ವಿಟರ್ ಚಿತ್ರ)   

ನವದೆಹಲಿ: ವಿನಯ್ ಕುಮಾರ್ ಸಕ್ಸೇನಾ ಅವರು ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ಈ ಹಿಂದಿನ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ವೈಯಕ್ತಿಕ ಕಾರಣಕ್ಕೆ ಕೆಲ ದಿನಗಳ ಹಿಂದಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಸಕ್ಸೇನಾ ಅವರು ಕೇಂದ್ರ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಮುಖ್ಯಸ್ಥರಾಗಿದ್ದರು.

ADVERTISEMENT

ವಿನಯ್ ಕುಮಾರ್ ಅವರನ್ನು ರಾಷ್ಟ್ರ ರಾಜಧಾನಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಳಿಸಿ ರಾಷ್ಟ್ರಪತಿರಾಮನಾಥ್ ಕೋವಿಂದ್ ಅವರುಇತ್ತೀಚೆಗೆ ಪ್ರಕಟಣೆ ಹೊರಡಿಸಿದ್ದರು.

2016ರಲ್ಲಿ ನಜೀಬ್ ಜಂಗ್ ಅವರ ರಾಜೀನಾಮೆ ಬಳಿಕ ಅನಿಲ್ ಬೈಜಾಲ್ ಅವರು ಲೆಫ್ಟಿನೆಂಟ್ ಗವರ್ನರ್ ಹುದ್ದೆಯನ್ನು ಅಲಂಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.