ADVERTISEMENT

ಸಿಬಿಐ ತನಿಖೆಯ ಸಿಂಧುತ್ವ ಪ್ರಶ್ನಿಸಿದ್ದ ಮೇಲ್ಮನವಿ: ವಿನಯ್ ಕುಲಕರ್ಣಿ ಅರ್ಜಿ ವಜಾ

ಸುಪ್ರೀಂ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 8:44 IST
Last Updated 7 ಫೆಬ್ರುವರಿ 2022, 8:44 IST
ವಿನಯ್ ಕುಲಕರ್ಣಿ
ವಿನಯ್ ಕುಲಕರ್ಣಿ   

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಗೌಡರ್ ಕೊಲೆ ಪ್ರಕರಣದ ಸಿಬಿಐ ತನಿಖೆಯ ಸಿಂಧುತ್ವವನ್ನು ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ರವೀಂದ್ರ ಭಟ್ ಹಾಗೂ‌ ಪಿ.ಎಸ್.ನರಸಿಂಹ ಅವರಿದ್ದ ಪೀಠವು ಕೊಲೆ ಪ್ರಕರಣದ ಸಿಬಿಐ ತನಿಖೆಯನ್ನು ಪ್ರಶ್ನಿಸಿ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾ‌ ಮಾಡಿತು.

ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು 2019ರಲ್ಲಿ ಸಿಬಿಐ ತನಿಖೆಗೆ ಆದೇಶಿಸಿತ್ತು.

ADVERTISEMENT

2016ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಕುಲಕರ್ಣಿ ಭಾಗಿಯಾಗಿದ್ದಾರೆ ಎಂದು ಯೋಗೇಶಗೌಡ ಕುಟುಂಬ ಸದಸ್ಯರು ಆರೋಪಿಸಿದ್ದರು. ನಂತರ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದ ವಿನಯ್ ಕುಲಕರ್ಣಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.