ವಿನಯ್ ಕುಮಾರ್
ಚಿತ್ರಕೃಪೆ– ಎಕ್ಸ್
ನವದೆಹಲಿ: ರಷ್ಯಾಗೆ ಭಾರತದ ರಾಯಭಾರಿಯಾಗಿ ವಿನಯ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ಪ್ರಕಟಣೆ ಹೊರಡಿಸಿದೆ.
ಪ್ರಸ್ತುತ ವಿನಯ್ ಕುಮಾರ್ ಅವರು ಮ್ಯಾನ್ಮಾರ್‌ನಲ್ಲಿ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಶೀಘ್ರದಲ್ಲಿಯೇ ರಷ್ಯಾದ ಭಾರತ ರಾಯಭಾರಿಯಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ ಎಂದು ಸಚಿವಾಲಯ ಹೇಳಿದೆ.
ಈ ಹಿಂದೆ ರಷ್ಯಾದಲ್ಲಿ ಭಾರತದ ರಾಯಭಾರಿಯಾಗಿ ಪವನ್ ಕಪೂರ್ ಅವರು ಕಾರ್ಯನಿರ್ವಹಿಸುತ್ತಿದ್ದರು.
ಭಾರತೀಯ ವಿದೇಶಾಂಗ ಸೇವೆಯ 1992 ರ ಬ್ಯಾಚ್‌ನ ಅಧಿಕಾರಿಯಾಗಿರುವ ವಿನಯ್ ಕುಮಾರ್, 2021ರ ಅಂತ್ಯದಿಂದ ಮ್ಯಾನ್ಮಾರ್‌ಗೆ ರಾಯಭಾರಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.