ADVERTISEMENT

ವೀಸಾ ಹಗರಣ: ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನಿರಾಕರಣೆ

ಚೀನಾದ 263 ಪ್ರಜೆಗಳಿಗೆ ವೀಸಾ ಕೊಡಿಸಿದ್ದರು ಎಂಬ ಆರೋಪ

ಪಿಟಿಐ
Published 3 ಜೂನ್ 2022, 13:48 IST
Last Updated 3 ಜೂನ್ 2022, 13:48 IST
ಸಂಸದ ಕಾರ್ತಿ ಚಿದಂಬರಂ –ಪಿಟಿಐ
ಸಂಸದ ಕಾರ್ತಿ ಚಿದಂಬರಂ –ಪಿಟಿಐ   

ನವದೆಹಲಿ: ವೀಸಾ ಪ್ರಕರಣ ಸಂಬಂಧ ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರು ಕಾರ್ತಿ ಚಿದಂಬರಂ ಅವರಿಗೆ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿದ್ದಾರೆ.

ಕಾರ್ತಿ ಅವರು ತಮ್ಮ ತಂದೆ ಪಿ.ಚಿದಂಬರಂ ಗೃಹ ಸಚಿವರಾಗಿದ್ದ ಅವಧಿಯಲ್ಲಿ (2011) ಚೀನಾದ 263 ಪ್ರಜೆಗಳಿಗೆ ವೀಸಾ ಕೊಡಿಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ತಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಹಣ ಅಕ್ರಮ ಹಣ ವರ್ಗಾವಣೆ (ಪಿಎಂಎಲ್‌ಎ) ಪ್ರಕರಣ ದಾಖಲಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.