Manmohan Singh
ನವದೆಹಲಿ: ಮನಮೋಹನ್ ಸಿಂಗ್ ಅವರು ತಮ್ಮ ಬಾಲ್ಯದ ದಿನಗಳನ್ನು ಕಳೆದ ನಿವಾಸದ ವಿಡಿಯೊವನ್ನು ಎಎನ್‌ಐ ಸುದ್ದಿ ಸಂಸ್ಥೆ ಪ್ರಕಟಿಸಿದೆ.
ಅಮೃತಸರದಲ್ಲಿ ಈ ನಿವಾಸ ಇದೆ. ಸದ್ಯ ಅಲ್ಲಿ ಯಾರೂ ವಾಸವಾಗಿಲ್ಲದ ಕಾರಣ ಅದು ಪಾಳು ಬಿದ್ದಿದೆ.
ಮನಮೋಹನ್ ಸಿಂಗ್ ಅವರು ಸಂಸದರಾಗಿದ್ದಾಗ ಒಮ್ಮೆ ಇಲ್ಲಿಗೆ ಭೇಟಿ ನೀಡಿದ್ದರು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
ಕೆಲ ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಪ್ರಧಾನಿ ಮನಮೋಹನ ಸಿಂಗ್ (92) ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ಗುರುವಾರ ನಿಧನರಾದರು. ಅವರಿಗೆ ಪತ್ನಿ ಗುರುಶರಣ್ ಸಿಂಗ್ ಹಾಗೂ ಮೂವರು ಪುತ್ರಿಯರು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.