ADVERTISEMENT

ಭಾರತದ ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2018, 20:21 IST
Last Updated 3 ಜುಲೈ 2018, 20:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಭಾರತದ ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆ ಹೆಚ್ಚಾಗಿದೆ. ಅದರಲ್ಲೂ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚು ಎಂದು ಹೊಸ ಅಧ್ಯಯನ ತಿಳಿಸಿದೆ.

ಏಮ್ಸ್‌, ಡಯಾಬಿಟಿಸ್ ಫೌಂಡೇಶನ್ ಆಫ್ ಇಂಡಿಯಾ, ನ್ಯಾಷನಲ್ ಡಯಾಬಿಟಿಸ್ ಒಬೇಸಿಟಿ ಮತ್ತು ಕೊಲೆಸ್ಟರಾಲ್ ಫೌಂಡೇಶನ್‌ನ ಸಹಯೋಗದೊಂದಿಗೆ ಫೋರ್ಟಿಸ್ ಸಿ-ಡಾಕ್ ಈ ಅಧ್ಯಯನ ನಡೆಸಿದೆ. ರಕ್ತದಲ್ಲಿ ಹೆಚ್ಚು ಗ್ಲೂಕೋಸ್‌ ಅಂಶವಿರುವ ಮಹಿಳೆಯರನ್ನು ವಿಟಮಿನ್ ಡಿ ಕೊರತೆ ಕಾಡುತ್ತಿದೆ. ಇಂತಹವರಲ್ಲಿ ಮೂಳೆಗಳು ಹಾನಿಗೊಳಗಾಗುವ ಪ್ರಮಾಣ ಇತರರಿಗಿಂತ ಹೆಚ್ಚಾಗಿರುತ್ತದೆ.

20ರಿಂದ 60 ವರ್ಷದೊಳಗಿನ 797 ಮಹಿಳೆಯರನ್ನು ಸಂಶೋಧನೆಗೆ ಒಳಪಡಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.