ನರೇಂದ್ರ ಮೋದಿ ಮತ್ತು ವ್ಲಾದಿಮಿರ್ ಪುಟಿನ್
–ರಾಯಿಟರ್ಸ್ ಚಿತ್ರ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಇಂದು (ಸೋಮವಾರ) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಇದೇ ವೇಳೆ ತಾವು ಈಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಅಲಾಸ್ಕದಲ್ಲಿ ನಡೆಸಿದ ಸಭೆಯ ವಿವರಗಳನ್ನು ಹಂಚಿಕೊಂಡಿದ್ದಾರೆ.
ಟ್ರಂಪ್ ಜತೆಗಿನ ಸಭೆಯಲ್ಲಿ ಉಕ್ರೇನ್–ರಷ್ಯಾ ನಡುವಿನ ಯುದ್ಧವನ್ನು ಅಂತ್ಯಗೊಳಿಸುವ ಸಲುವಾಗಿ ಮಾತುಕತೆ ನಡೆಸಲಾಯಿತು ಎಂಬ ಮಾಹಿತಿಯನ್ನು ಪುಟಿನ್, ಮೋದಿಗೆ ವಿವರಿಸಿದ್ದಾರೆ.
‘ದೂರವಾಣಿ ಕರೆ ಮೂಲಕ ಸಂಭಾಷಣೆ ನಡೆಸಿ, ಅಲಾಸ್ಕದಲ್ಲಿ ನಡೆದ ಸಭೆ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಗೆಳೆಯ ಪುಟಿನ್ ಅವರಿಗೆ ಧನ್ಯವಾದಗಳು’ ಎಂದು ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಉಕ್ರೇನ್ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವಂತೆ ಭಾರತ ಹಿಂದಿನಿಂದಲೂ ಹೇಳುತ್ತಲೇ ಇದೆ. ಈ ನಿಟ್ಟಿನಲ್ಲಿ ಕೈಗೊಳ್ಳುವ ಕ್ರಮಗಳಿಗೂ ನಮ್ಮ ಬೆಂಬಲ ಇರಲಿದೆ’ ಎಂದೂ ಮೋದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.