ಫರುಖಾಬಾದ್: ಉತ್ತರ ಪ್ರದೇಶದ ಫರುಖಾಬಾದ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರದ ವೇಳೆ ಜಿಹಾದ್‌ಗಾಗಿ ಮತ ನೀಡಿ ಎಂದು ಸಲ್ಮಾನ್ ಖುರ್ಷಿದ್ ಅವರ ಸೋದರ ಸೊಸೆ ಮಾರಿಯಾ ಅಲಂ ಹೇಳಿಕೆ ನೀಡಿದ್ದು, ಮಾರಿಯಾ ಮತ್ತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಖುರ್ಷಿದ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಇಂಡಿಯಾ’ ಬಣದ ಅಭ್ಯರ್ಥಿ ನವಲ್ ಕಿಶೋರ್ ಶಕ್ಯ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಸಮಾಜವಾದಿ ಪಕ್ಷದ ನಾಯಕಿ ಅಲಂ, ಜಿಹಾದ್‌ಗಾಗಿ ಮತ ಹಾಕಿ ಎಂದು ಮನವಿ ಮಾಡಿದ್ದಾರೆ. ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಅಲ್ಪಸಂಖ್ಯಾತರಿಗೆ ಇದು ಅಗತ್ಯವಾಗಿದೆ ಎಂದಿದ್ದಾರೆ ಎಂದು ವರದಿ ತಿಳಿಸಿದೆ.
ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಕಣ್ಗಾವಲು ತಂಡ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ನಿಬಂಧನೆಗಳು ಮತ್ತು ಜನಪ್ರತಿನಿಧಿ ಕಾಯ್ದೆ ಉಲ್ಲಂಘನೆ ಆರೋಪದಡಿ ಮಾರಿಯಾ ವಿರುದ್ಧ ಪ್ರಕರಣ ದಾಖಲಾಗಿದೆ.
ಚುನಾವಣಾ ಸಭೆಯ ಮುಖ್ಯ ಅತಿಥಿಯಾಗಿದ್ದ ಸಲ್ಮಾನ್ ಖುರ್ಷಿದ್ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಫ್ಲೈಯಿಂಗ್ ಸ್ಕ್ವಾಡ್ ಮತ್ತು ಕಣ್ಗಾವಲು ತಂಡ ನೀಡಿದ ದೂರನ್ನು ಆಧರಿಸಿ ಮಾರಿಯಾ ಅಲಂ ಮತ್ತು ಸಲ್ಮಾನ್ ಖುರ್ಷಿದ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕೈಮ್ ಗಂಜ್ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಮಾವತರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.