ಅಖಿಲೇಶ್ ಯಾದವ್, ಪ್ರಿಯಾಂಕಾ ಗಾಂಧಿ
ನವದೆಹಲಿ: 'ಮತ ಕಳ್ಳತನ' ಆರೋಪಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸಂಸದರು ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿವರೆಗೆ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಬ್ಯಾರಿಕೇಡ್ ಹಾರಿರುವ ಘಟನೆ ನಡೆದಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ 'ಇಂಡಿಯಾ' ಮೈತ್ರಿಕೂಟದ ನಾಯಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನಾ ಮೆರವಣಿಗೆಯನ್ನು ದೆಹಲಿ ಪೊಲೀಸರು ಬ್ಯಾರಿಕೇಡ್ ಬಳಸಿ ತಡೆದಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನೂಕುನುಗ್ಗಲು ಉಂಟಾಗಿತ್ತು.
ಬಸ್ಸಿನಲ್ಲಿ ಪ್ರತಿಭಟಿಸಿದ ಪ್ರಿಯಾಂಕಾ...
ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಸ್ಸಿನಲ್ಲಿಯೇ ಕುಳಿತುಕೊಂಡು ಪ್ರಿಯಾಂಕಾ ಪ್ರತಿಭಟಿಸುತ್ತಿರುವ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.