ADVERTISEMENT

ಮತಕಳವು | ದಾಖಲೆಯಿದ್ದರೂ ತನಿಖೆ ಮಾಡದ ಆಯೋಗ: ಸಚಿನ್‌ ಪೈಲಟ್‌

ಪಿಟಿಐ
Published 12 ಸೆಪ್ಟೆಂಬರ್ 2025, 13:37 IST
Last Updated 12 ಸೆಪ್ಟೆಂಬರ್ 2025, 13:37 IST
<div class="paragraphs"><p>ಸಚಿನ್‌ ಪೈಲಟ್‌</p></div>

ಸಚಿನ್‌ ಪೈಲಟ್‌

   

ಇಂದೋರ್‌: ‘ಮತ ಕಳ್ಳತನ’ಕ್ಕೆ ಸಂಬಂಧಿಸಿದಂತೆ ಸಾಕಷ್ಟು ದಾಖಲೆಗಳನ್ನು ಒದಗಿಸಿದ್ದರೂ ಚುನಾವಣಾ ಆಯೋಗ ತನಿಖೆ ನಡೆಸಲು ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಸಚಿನ್‌ ಪೈಲಟ್‌ ಶುಕ್ರವಾರ ದೂರಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಾಂವಿಧಾನಿಕ ಸಂಸ್ಥೆಗಳು ದುರ್ಬಲಗೊಂಡಿವೆ ಮತ್ತು ಜನರು ಮತಚಲಾಯಿಸುವ ಹಕ್ಕನ್ನು ಕಸಿದುಕೊಂಡಿದೆ ಎಂದು ವಾಗ್ದಾಳಿ ಮಾಡಿದರು.

ADVERTISEMENT

‘ಮತ ಕಳ್ಳತನದ ವಿರುದ್ಧ ರಾಹುಲ್‌ ಗಾಂಧಿ ಅವರು ಹೋರಾಟ ಆರಂಭಿಸಿದ್ದಾರೆ. ಈ ಸಂಬಂಧ ನಾವು ದೇಶದೆಲ್ಲೆಡೆ ಅಭಿಯಾನ ಆಯೋಜಿಸಿದ್ದೇವೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.