ನಾಗಪುರ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ ‘ಮತ ಕಳವು’ ಆರೋಪದ ಕುರಿತು ಚುನಾವಣಾ ಆಯೋಗವು ಸಮಗ್ರ ತನಿಖೆ ನಡೆಸಬೇಕು ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಒತ್ತಾಯಿಸಿದ್ದಾರೆ.
‘ಮತ ಕಳವು ಕುರಿತ ರಾಹುಲ್ ಗಾಂಧಿ ಅವರು ಮಂಡಿಸಿರುವ ವಿವರಗಳು ಉತ್ತಮ ಸಂಶೋಧನೆಯಿಂದ ಕೂಡಿವೆ. ಚುನಾವಣಾ ಪ್ರಕ್ರಿಯೆಯ ಸಮಗ್ರತೆ ಹಾಗೂ ಅದರ ಕಾವಲುಗಾರನ ಕುರಿತು ಜನರಿಗೆ ಮೂಡಿರುವ ಅನುಮಾನಗಳನ್ನು ಹೋಗಲಾಡಿಸುವ ಅಗತ್ಯವಿದೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂಬ ಭರವಸೆ ಇದೆ’ ಎಂದು ಸುದ್ದಿಗಾರರಿಗೆ ಶನಿವಾರ ತಿಳಿಸಿದ್ದಾರೆ.
‘ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವು ರಾಹುಲ್ ಗಾಂಧಿ ಅವರಿಂದ ಪ್ರತ್ಯೇಕ ಪ್ರಮಾಣಪತ್ರವನ್ನು ಕೇಳಬಾರದು. ಅವರು ಈ ಬಗ್ಗೆ ಸಂಸತ್ತಿನಲ್ಲೂ ಹೇಳಿದ್ದರು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.