
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್ಐಆರ್) ಬೆಳವಣಿಗೆಗಳ ಬಗ್ಗೆ ಚರ್ಚಿಸಲು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನಾಯಕರ ಸಭೆಯನ್ನು ಕಾಂಗ್ರೆಸ್ ಪಕ್ಷ ಕರೆದಿದೆ.
ಇದೇ 18ರಂದು ಬೆಳಿಗ್ಗೆ 10.30ಕ್ಕೆ ಪಕ್ಷದ ಪ್ರಧಾನ ಕಚೇರಿ ‘ಇಂದಿರಾ ಭವನ’ದಲ್ಲಿ ಆಯೋಜಿಸಿರುವ ಈ ಸಭೆಗೆ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಘಟಕದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಮತ್ತು ರಾಜ್ಯ ಉಸ್ತುವಾರಿಗಳು ಮತ್ತು ಎಐಸಿಸಿ ಕಾರ್ಯದರ್ಶಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯಗಳ ನಾಯಕರು ಸಭೆಯಲ್ಲಿ ತಮ್ಮ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರಕ್ರಿಯೆ ಮತ್ತು ತಮ್ಮ ಉಸ್ತುವಾರಿಯಲ್ಲಿನ ಮೇಲ್ವಿಚಾರಣಾ ಕಾರ್ಯವಿಧಾನ ಕುರಿತು ಕೇಂದ್ರ ನಾಯಕರಿಗೆ ಮಾಹತಿ ನೀಡಲಿದ್ದಾರೆ.
ಬಿಹಾರ ಚುನಾವಣೆಯ ನಂತರ ಅಂಡಮಾನ್ ಮತ್ತು ನಿಕೋಬಾರ್, ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಲಕ್ಷದ್ವೀಪ, ಮಧ್ಯಪ್ರದೇಶ, ಪುದುಚೇರಿ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಎಸ್‌ಐಆರ್ ಅನ್ನು ಚುನಾವಣಾ ಆಯೋಗ ಆರಂಭಿಸಿತು. ಇದರಲ್ಲಿ, ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.