
ನವದೆಹಲಿ/ಕಾನ್ಪುರ: ದೇಶದ ಮೂರು ಕೇಂದ್ರಾಡಳಿತ ಪ್ರದೇಶಗಳು ಮತ್ತು 9 ರಾಜ್ಯಗಳ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಮಂಗಳವಾರದಿಂದ ಆರಂಭವಾಗಲಿದೆ.
ಡಿಸೆಂಬರ್ 4ಕ್ಕೆ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಡಿ.9ಕ್ಕೆ ಮತದಾರರ ಪಟ್ಟಿಯ ಕರಡನ್ನು ಚುನಾವಣಾ ಆಯೋಗವು ಬಿಡುಗಡೆ ಮಾಡಲಿದೆ. ಅಂತಿಮ ಪಟ್ಟಿಯನ್ನು 2026ರ ಫೆ.7ರಂದು ಬಿಡುಗಡೆ ಮಾಡಲಿದೆ. ಆಯೋಗವು ಬಿಹಾರದಲ್ಲಿ ಇತ್ತೀಚೆಗಷ್ಟೇ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಳಿಸಿತ್ತು.
ಎಲ್ಲೆಲ್ಲಿ?: ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪ, ಪುದುಚೇರಿ, ಛತ್ತೀಸಗಢ, ಗೋವಾ, ಗುಜರಾತ್, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು, ಕೇರಳ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ನಡೆಯಲಿದೆ.
ಈ ಪೈಕಿ ತಮಿಳುನಾಡು, ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಕೇರಳದಲ್ಲಿ 2026ರಲ್ಲಿ ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಎಸ್‌ಐಆರ್ ನಡೆಸದಂತೆ ತಡೆಯಲು ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಅಲ್ಲಿನ ಸರ್ಕಾರ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.