
ಚುನಾವಣಾ ಆಯೋಗ
ಪಿಟಿಐ ಚಿತ್ರ
ನವದೆಹಲಿ: ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಭಾಗವಾಗಿ ಗುರುವಾರ ಒಂದೇ ದಿನದಲ್ಲಿ ಐದು ಕೋಟಿಗೂ ಹೆಚ್ಚು ಅರ್ಜಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಎರಡನೇ ಹಂತದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಈವರೆಗೆ 42 ಕೋಟಿ ಅರ್ಜಿ ನಮೂನೆಗಳನ್ನು ವಿತರಿಸಲಾಗಿದೆ. ಅಂದರೆ, ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಒಟ್ಟು 50.99 ಕೋಟಿ ಮತದಾರರಲ್ಲಿ ಇದುವರೆಗೆ ಶೇ 82.71ರಷ್ಟು ಮಂದಿಗೆ ಅರ್ಜಿ ನಮೂನೆ ವಿತರಿಸಿದಂತೆ ಆಗಿದೆ.
ಮೊದಲ ಹಂತದ ಎಸ್‌ಐಆರ್ ಪ್ರಕ್ರಿಯೆಯನ್ನು ಬಿಹಾರದಲ್ಲಿ ನಡೆಸಲಾಗಿದೆ. ಚುನಾವಣಾ ಆಯೋಗವು ಎರಡನೇ ಹಂತದಲ್ಲಿ ಛತ್ತೀಸಗಢ, ಗೋವಾ, ಗುಜರಾತ್, ಕೇರಳ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ಹಾಗೂ ಲಕ್ಷದ್ವೀಪದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.