ADVERTISEMENT

ಎರಡನೇ ಹಂತದ SIR ಪ್ರಕ್ರಿಯೆ: 99ರಷ್ಟು ಮತದಾರರಿಗೆ ಗಣತಿ ನಮೂನೆ ಹಂಚಿಕೆ–EC

ಪಿಟಿಐ
Published 24 ನವೆಂಬರ್ 2025, 11:28 IST
Last Updated 24 ನವೆಂಬರ್ 2025, 11:28 IST
<div class="paragraphs"><p>ಚುನಾವಣಾ ಆಯೋಗ</p></div>

ಚುನಾವಣಾ ಆಯೋಗ

   

ಪಿಟಿಐ ಚಿತ್ರ

ನವದೆಹಲಿ: ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಎರಡನೇ ಹಂತದಲ್ಲಿ ಶೇ 99ಕ್ಕೂ ಹೆಚ್ಚು ಗಣತಿ ನಮೂನೆ ಅರ್ಜಿಗಳನ್ನು ಮತದಾರರಿಗೆ ವಿತರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ADVERTISEMENT

50.97 ಕೋಟಿ ಮತದಾರರಲ್ಲಿ 50.50 ಕೋಟಿಗೂ ಹೆಚ್ಚು ಜನರಿಗೆ ಗಣತಿ ನಮೂನೆಗಳನ್ನು ನೀಡಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಐಆರ್ ಪ್ರಕ್ರಿಯೆಯು ನವೆಂಬರ್ 4ರಂದು ಆರಂಭವಾಗಿದ್ದು, ಡಿಸೆಂಬರ್ 4ರವರೆಗೆ ನಡೆಯಲಿದೆ.

ಮೂರು ಕೇಂದ್ರಾಡಳಿತ ಪ್ರದೇಶ ಮತ್ತು ಒಂಬತ್ತು ರಾಜ್ಯಗಳಾದ ಛತ್ತೀಸಗಢ, ಗೋವಾ, ಗುಜರಾತ್, ಕೇರಳ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಎರಡನೇ ಹಂತದ ಎಸ್‌ಐಆರ್‌ ಪ್ರಕ್ರಿಯೆ ನಡೆಯುತ್ತಿದೆ.

ಈ ಪೈಕಿ ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಅಸ್ಸಾಂನಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇಲ್ಲಿ ಪ್ರತ್ಯೇಕವಾಗಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.