ADVERTISEMENT

Manipur Election: ಮಣಿಪುರದಲ್ಲಿ ಮೊದಲ ಹಂತದ ಮತದಾನ ಆರಂಭ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಫೆಬ್ರುವರಿ 2022, 2:19 IST
Last Updated 28 ಫೆಬ್ರುವರಿ 2022, 2:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಂಫಾಲ್‌: ಮಣಿಪುರ ವಿಧಾನಸಭೆ ಮೊದಲ ಹಂತದ ಮತದಾನ ಸೋಮವಾರ ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡಿದೆ.

60 ವಿಧಾನಸಭಾ ಕ್ಷೇತ್ರಗಳ ಪೈಕಿ 38 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 15 ಮಹಿಳೆಯರು ಸೇರಿದಂತೆ 173 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಮುಖ್ಯಮಂತ್ರಿ ಬೀರೇನ್ ಸಿಂಗ್ ಅವರು ಬೆಳಿಗ್ಗೆಯೇ ಇಂಫಾಲ್‌ ಶ್ರಿವಾನ್ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ADVERTISEMENT

ಬಳಿಕ ಮಾತನಾಡಿದ ಅವರು, ನನ್ನ ಕ್ಷೇತ್ರದ ಶೇ 75ರಷ್ಟು ಜನ ಬಿಜೆಪಿ ಹಾಗೂ ನನ್ನ ಪರ ಮತ ಚಲಾಯಿಸಲಿದ್ದಾರೆ ಎಂದು ಭಾವಿಸಿದ್ದೇನೆ. ಮೊದಲ ಹಂತದಲ್ಲಿ 38 ಕ್ಷೇತ್ರಗಳ ಪೈಕಿ ಬಿಜೆಪಿಯು 30ರಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ. ಮಣಿಪುರದ ಜನತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಷ್ಟಪಡುತ್ತಾರೆ ಎಂದು ಹೇಳಿದ್ದಾರೆ.

ಇಂದು (ಸೋಮವಾರ) ಐದು ಜಿಲ್ಲೆಗಳಾದ ಇಂಫಾಲ್‌ ಪೂರ್ವ, ಇಂಫಾಲ್‌ ಪಶ್ಚಿಮ, ವಿಷ್ಣುಪುರ, ಕಂಗ್‌ಪೋಕಪಿ ಮತ್ತು ಚುರಾಚಾಂದ್‌ಪುರಗಳಲ್ಲಿ 12 ಲಕ್ಷ ಜನರು ಮತ ಚಲಾಯಿಸಲಿದ್ದಾರೆ. 1,721 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.