ADVERTISEMENT

7 ವಿಧಾನಸಭಾ, ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ: ಸೋಮವಾರ ಮತದಾನ

ಪಿಟಿಐ
Published 4 ಡಿಸೆಂಬರ್ 2022, 15:32 IST
Last Updated 4 ಡಿಸೆಂಬರ್ 2022, 15:32 IST
ಪ್ರಾತಿನಿಧಿಕ ಚಿತ್ರ 
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಐದು ರಾಜ್ಯಗಳ ಆರು ವಿಧಾನಸಭಾ ಕ್ಷೇತ್ರಗಳು ಹಾಗೂ ಉತ್ತರಪ್ರದೇಶದ ಮೈನ್‌ಪುರಿಯ ಒಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದೆ.

ಉತ್ತರಪ್ರದೇಶದ ರಾಂಪುರ್ ಸದರ್ ಮತ್ತು ಖತೌಲಿ, ಒಡಿಶಾದ ಪದಂಪುರ, ರಾಜಸ್ಥಾನದ ಸರ್ದಾರ್ ಶಹರ್, ಬಿಹಾರದ ಕುರ್ಹಾನಿ ಮತ್ತು ಛತ್ತೀಸಗಢದ ಭಾನುಪ್ರತಾಪ್‌ಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.

ಉತ್ತರಪ್ರದೇಶದ ರಾಂಪುರ್‌ ಸದರ್ ಮತ್ತು ಖತೌಲಿ ವಿಧಾನಸಭಾ ಕ್ಷೇತ್ರಗಳು ಮತ್ತು ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷ-ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮೈತ್ರಿಕೂಟದ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಬಿಎಸ್‌ಪಿ ಹಾಗೂ ಕಾಂಗ್ರೆಸ್ ಈ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.