ADVERTISEMENT

ವಿಚಾರಣಾಧೀನ ಕೈದಿಗಳಿಗೆ ಮತದಾನದ ಹಕ್ಕು: ಕೇಂದ್ರದ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

ಪಿಟಿಐ
Published 10 ಅಕ್ಟೋಬರ್ 2025, 13:57 IST
Last Updated 10 ಅಕ್ಟೋಬರ್ 2025, 13:57 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

(ಎ.ಐ ಚಿತ್ರ)

ನವದೆಹಲಿ: ದೇಶದಾದ್ಯಂತ ಜೈಲುಗಳಲ್ಲಿರುವ ಸುಮಾರು 4.5 ಲಕ್ಷ ವಿಚಾರಣಾಧೀನ ಕೈದಿಗಳಿಗೆ ಮತದಾನದ ಹಕ್ಕನ್ನು ನೀಡುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದೆ.

ADVERTISEMENT

ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್‌ ಅವರ ಪೀಠವು ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರ ವಾದವನ್ನು ಆಲಿಸಿತು. 

1951ರ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್‌ 62(5)ರ ಅಡಿಯಲ್ಲಿ ಮಾಡಿರುವ ನಿಷೇಧವು ಸಂವಿಧಾನವು ಖಾತರಿಪಡಿಸಿರುವ ಹಕ್ಕುಗಳು ಮತ್ತು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ಸಂಪ್ರದಾಯಗಳನ್ನು ಉಲ್ಲಂಘಿಸುತ್ತದೆ ಎಂದು ಪ್ರಶಾಂತ್‌ ಭೂಷಣ್‌ ಪೀಠಕ್ಕೆ ತಿಳಿಸಿದರು.

ಪಂಜಾಬ್‌ನ ಪಟಿಯಾಲ ನಿವಾಸಿ ಸುನಿತಾ ಶರ್ಮಾ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಚುನಾವಣೆಗೆ ಸಂಬಂಧಿಸಿದ ಅಪರಾಧಗಳು ಅಥವಾ ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗದ ಕೈದಿಗಳು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ನ್ಯಾಯಾಲಯ ಮಧ್ಯಪ್ರವೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.