ADVERTISEMENT

VP Election 2025 | ನ್ಯಾ. ಸುದರ್ಶನ ರೆಡ್ಡಿ ಗೆಲುವು ಸಾಧಿಸಲಿದ್ದಾರೆ: ಖರ್ಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಸೆಪ್ಟೆಂಬರ್ 2025, 6:29 IST
Last Updated 9 ಸೆಪ್ಟೆಂಬರ್ 2025, 6:29 IST
<div class="paragraphs"><p>ನ್ಯಾ. ಸುದರ್ಶನ ರೆಡ್ಡಿ-ಮಲ್ಲಿಕಾರ್ಜುನ ಖರ್ಗೆ</p></div>

ನ್ಯಾ. ಸುದರ್ಶನ ರೆಡ್ಡಿ-ಮಲ್ಲಿಕಾರ್ಜುನ ಖರ್ಗೆ

   

ಪಿಟಿಐ ಚಿತ್ರ 

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ದಿಢೀರ್‌ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು (ಮಂಗಳವಾರ) ಚುನಾವಣೆ ನಡೆಯುತ್ತಿದೆ.

ADVERTISEMENT

ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಈ ಬಾರಿ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ನ್ಯಾ. ಸುದರ್ಶನ ರೆಡ್ಡಿ ಅವರಿಗೆ ಅತಿ ಹೆಚ್ಚು ಮತಗಳು ಲಭಿಸಲಿದ್ದು, ಅವರು ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ವಿಶ್ವಾಸ ವ್ಯಕ್ತಡಿಸಿದರು.

ಮತ ಚಲಾಯಿಸಲು ನಿವಾಸದಿಂದ ತೆರಳುವ ಮುನ್ನ ಖರ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೊವನ್ನು ಸುದ್ದಿಸಂಸ್ಥೆ ಪಿಟಿಐ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ಬೆಳಿಗ್ಗೆ 10 ಗಂಟೆಗೆ ಮತದಾನ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್‌.ಡಿ. ದೇವೇಗೌಡ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ನಾಯಕರು ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ.

ಜುಲೈ 21ರಂದು ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ದಿಢೀರ್‌ ರಾಜೀನಾಮೆ ನೀಡಿದ್ದರು.

ಎನ್‌ಡಿಎ ಮೈತ್ರಿಕೂಟದಿಂದ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್‌ ಹಾಗೂ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ನ್ಯಾ. ಸುದರ್ಶನ ರೆಡ್ಡಿ ಕಣಕ್ಕಿಳಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.